ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಸೂಚಿಸಿದ್ದಾರೆ. 57 ಬಾಲ್ಯ ವಿವಾಹ ಪ್ರಕರಣಗಳಲ್ಲಿ ಬಹಳಷ್ಟು ನಡೆದಿರುವುದು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರದು. ಪ್ರೌಢಶಾಲೆಯ ಹೆಣ್ಣು ಮಗು 3 ದಿನ ಕ್ಕಿಂತ ಹೆಚ್ಚು ಶಾಲೆಗೆ ಬರುತ್ತಿಲ್ಲ ಎಂದರೆ ಪರಿಶೀಲನೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ