SHOCKING | ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದುಸಂಜೆ 4 ಗಂಂಟೆಯ ಸುಮಾರಿಗೆ ನಡೆದಿದೆ.

ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ.

ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!