ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾನೆ.
ತಲಪಾಡಿಯ ಅಂಕಿತ್ ಎಂಬಾವರಿಗೆ ಸೇರಿದ ರಿಟ್ಜ್ ಕಾರು ಇದಾಗಿತ್ತು.