ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ತ್ರಿಬಲ್ ಮರ್ಡರ್ ನಡೆದಿದ್ದು, ಪತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಈ ತ್ಯೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಹೊರಬೀಳಲಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಗಂಡನಿಂದಲೇ ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಟ್ರಾಫಿಕ್ ಹೋಂ ಗಾರ್ಡ್ ಪತ್ನಿ ಹಾಗೂ ಇಬ್ಬರು ಮಕ್ಕಳ ಉಸಿರು ನಿಲ್ಲಿಸಿ ಕ್ರೌರ್ಯ ಮೆರೆದಿದ್ದಾನೆ .
ಹೋಂ ಗಾರ್ಡ್ ಗಂಗರಾಜು ಎಂಬುವವರಿಂದ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಮೂವರ ದುರಂತ ಅತ್ಯವಾಗಿದೆ ಎಂದು ಶಂಕಿಸಲಾಗಿದೆ. ಮೃತರನ್ನು ಗಂಗರಾಜು ಪತ್ನಿ ಭಾಗ್ಯಮ್ಮ ಹಾಗೂ ಮಗಳು ಮತ್ತು ಅಕ್ಕನ ಮಗಳು ಎಂದು ಗುರುತಿಸಲಾಗಿದೆ. ಮೂವರ ಜೀವ ತೆಗೆದ ಆರೋಪಿ ಗಂಗರಾಜು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.