ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿ,ಪ್ರಸ್ತುತ ಪುತ್ತೂರಿಗೆ ಸಮೀಪದ ಕಬಕದಲ್ಲಿ ವಾಸ್ತವ್ಯವಿರುವ ವ್ಯಕ್ತಿಯೋರ್ವ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.
ಮೂಲತ: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಗರಡಿ ಮನೆನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸ್ತವ್ಯವಿರುವ ಯತೀಶ್ ( 50) ಡೆಂಗ್ಯೂ ಜ್ವರಕ್ಕೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದ.ಕ.ಜಿಲ್ಲೆಯಲ್ಲು ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಯಾದಂತಾಗಿದೆ.
ಮೃತರು ಬಿ.ಸಿ.ರೋಡಿನಲ್ಲಿ ಬೀಡಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು.
ಯತೀಶ್ ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಬುಧವಾರದಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.