SHOCKING | ನಮ್ಮ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ವ್ಯಕ್ತಿಯು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಗಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ 1:13 ರ ಮಾರಿಗೆ ಹಸಿರು ಮಾರ್ಗದಲ್ಲಿ ಈ ಒಂದು ಘಟನೆ ನಡೆದಿದೆ. ಈ ವೇಳೆ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಯಿತು. ನಮ್ಮ ಮೆಟ್ರೋ ಹಸಿರು ಮಾರ್ಗದ ಹಳೆಯ ಮೇಲೆ ಬಿದ್ದಿದ್ದ ವ್ಯಕ್ತಿ ಮೆಟ್ರೋದಿಂದ ಇಳಿಯುವಾಗ ಆಯ ತಪ್ಪಿ ಪ್ರಯಾಣಿಕ ಹಳಿಯ ಮೇಲೆ ಬಿದ್ದಿದ್ದಾನೆ.

ಈ ವೇಳೆ ತಕ್ಷಣ ಭದ್ರತಾ ಸಿಬ್ಬಂದಿಗಳು ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದಾರೆ. ಪವರ್ ಸಪ್ಲೈ ಆಫ್ ಮಾಡಿದ್ದರಿಂದ ಮೆಟ್ರೋ ಪ್ರಯಾಣಿಕರು ಬಚಾವಾಗಿದ್ದಾರೆ. ಈ ವೇಳೆ ಹಳಿಗೆ ಬಿದ್ದರೂ ಯಾವುದೇ ತೊಂದರೆ ಇಲ್ಲದೆ ಪ್ರಯಾಣಿಕ ಪಾರಾಗಿದ್ದಾನೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!