ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಮತ್ತು ದ್ವಿಚಕ್ರ ವಾಹನ ರಸ್ತೆಪಕ್ಕದ ಕಂದಕಕ್ಕೆ ಬಿದ್ದಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒರ್ವ ಹಾಗೂ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.