SHOCKING | ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ: ಮಹಿಳೆ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ತಮಿಳುನಾಡಿನ ಕಡಲೂರು ಜಿಲ್ಲೆಯ ಶಿವನಾರ್ಪುರಂನ ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ (Fire breaks out) ಹೊತ್ತಿಕೊಂಡ ಪರಿಣಾಮ ಓರ್ವ ಮಹಿಳೆ ಸಜೀವ ದಹನವಾಗಿರುವಂತಹ ಘಟನೆ ನಡೆದಿದೆ.

8 ಮಹಿಳೆಯರಿಗೆ ಗಾಯವಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳು ಮಹಿಳೆಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಪೊಲೀಸರು ಮತ್ತು ಇತರ ಜಿಲ್ಲಾ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಂದು ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಆ ಪ್ರದೇಶದಲ್ಲಿ ಗೊಂದಲದ ವಾತಾವರಣ ಉಂಟಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!