SHOCKING | ಸೇನಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ ನಡೆದಿದೆ.

ಸೇನೆಯವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿದೆ. ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ರೈಲು ಡಿಟೋನೇಟರ್‍ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದಾರೆ. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.

ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇನ್ನೂ, ಉತ್ತರ ಪ್ರದೇಶದ ಕಾನ್ಪುರದ ಪ್ರೇಂಪುರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಭಾನುವಾರ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರೈಲು ನಿಲ್ಲಿಸಲು ತುರ್ತು ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ.

ರೈಲು ಕಾನ್ಪುರದಿಂದ ಪ್ರಯಾಗ್‍ರಾಜ್‍ಗೆ ತೆರಳುತ್ತಿದ್ದಾಗ ಬೆಳಗ್ಗೆ 8:10ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!