ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದೆ.
ಅಗ್ನಿ ದುರಂತದ ಹಿನ್ನೆಲೆ ಇಡೀ ಕೈಗಾರಿಕಾ ಪ್ರದೇಶ ಹೊಗೆಯಿಂದ ಆವರಿಸಿದ್ದು, ಅಕ್ಕಪಕ್ಕದಲ್ಲಿಯೂ ಬೆಂಕಿ ಆವರಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.