SHOCKING | ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಗಂಗಮ್ಮನಗುಡಿ ಬಳಿಯ ಸ್ಪಾಂಜ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಏಕಾಏಕಿ ಸ್ಪಾಂಜ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಫ್ಯಾಕ್ಟರಿ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!