SHOCKING | ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ: ಹೊತ್ತಿ ಉರಿದ ಮೊಬೈಲ್ ಟವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಸ್ ಕಂಪನಿಯ ಮೊಬೈಲ್ ನೆಟ್​​ವರ್ಕ್ ಟವರ್ ಬೆಂಕಿಗಾಹುತಿ ಆಗಿರು ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ.

ಜನರೇಟರ್​ ರೂಮ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಇಡೀ ಟವರ್​ಗೆ ಬೆಂಕಿ ವ್ಯಾಪಿಸಿತ್ತು. ಜನರೇಟರ್​ಗೆ ತುಂಬಿಸಿದ್ದ ಡಿಸೇಲ್​ಗೆ ಬೆಂಕಿ ತಗುಲಿ ಟವರ್ ಹೊತ್ತಿ ಉರಿದಿತ್ತು. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ವಾಹನದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!