October 17, 2026
Saturday, October 17, 2026
spot_img

SHOCKING | ಮತ್ತೊಂದು ಖಾಸಗಿ ಬಸ್​ ದುರಂತ: ಹುಲಿಕಲ್ ಘಾಟಿಯಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಮಧ್ಯಾಹ್ನ ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಸಂಭವಿಸಿದೆ.

ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಖಾಸಗಿ ಬಸ್ ನಲ್ಲಿ ಘಾಟಿಯ ಮಧ್ಯಭಾಗದಲ್ಲಿ ಏಕಾಏಕಿ ಬಸ್‌ನ ಇಂಜಿನ್ ಭಾಗದಿಂದ ಹೊಗೆ ಬರಲು ಆರಂಭವಾಯಿತು. ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಜ್ವಾಲೆಯಾಗಿ ಇಡೀ ಬಸ್‌ಗೆ ಹತ್ತಿಕೊಂಡಿತು. ಚಾಲಕ ಮತ್ತು ನಿರ್ವಾಹಕರು ತಕ್ಷಣ ಬಸ್‌ನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರನ್ನು ತುರ್ತಾಗಿ ಹೊರಗೆ ಕರೆದೊಯ್ದರು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

https://hosadigantha.com/category/crime-news/#google_vignette

ಘಟನೆ ನಡೆದ ವೇಳೆ ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ.ಸ್ಥಳಕ್ಕೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಾಟ್ ರಸ್ತೆಯಲ್ಲಿ ಬಸ್ ಸುಟ್ಟು ಹೋಗಿರುವುದರಿಂದ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು

Must Read