SHOCKING | ಬೆಂಗಳೂರಿನಲ್ಲಿ ಗಾಳಿ ಮಳೆಗೆ ಮರ ಬಿದ್ದು ಆಟೋ ಚಾಲಕ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಬೆಂಗಳೂರಿನಲ್ಲಿ ದಿಢೀರ್ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಆಟೋ ಮೇಲೆ ಮರಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರಿನ ಕತ್ರಿಗುಪ್ಪೆಯ ಎಂ.ಎಂ ಬಾರ್ ಬಳಿಯಲ್ಲಿ ಭಾರೀ ಮಳೆಯೊಂದಿಗೆ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಚಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕೆ ಆರ್ ಮಾರ್ಕೆಟ್, ಕತ್ರಿಗುಪ್ಪೆ, ಜಯನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡ ಪರಿಣಾಮ ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!