ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತಿನ ಭರೂಚ್ ಮತ್ತು ಅಂಕಲೇಶ್ವರ ನಡುವೆ ಚಲಿಸುತ್ತಿದ್ದ ಆವಂತಿಕಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸುದ್ದಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಪ್ರಾಥಮಿಕ ವರದಿಯಾಗಿದೆ.
ಭರೂಚ್’ನ ಸಿಲ್ವರ್ ಬ್ರಿಡ್ಜ್ ಬಳಿ ಪಶ್ಚಿಮ ಎಕ್ಸ್ಪ್ರೆಸ್ ರೈಲಿನಿಂದ ಹೊಗೆ ಬರುತ್ತಿರುವುದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿತ್ತು.
ಎಂಜಿನ್ ನಿಂದ ಎರಡನೇ ಕಂಪಾರ್ಟ್ಮೆಂಟ್’ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಠಾತ್ ಬೆಂಕಿ ಕಾಣಿಸಿಕೊಂಡ ನಂತರ ರೈಲು 45 ನಿಮಿಷಗಳ ಕಾಲ ಸ್ಥಗಿತಗೊಂಡಿತು. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ .