ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪುಷ್ಪ 2’ ದಿ ರೂಲ್ ಸ್ಕ್ರೀನಿಂಗ್ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಸಂಧ್ಯಾ ಥಿಯೇಟರ್ ಘಟನೆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನ ಎಂದು ವರದಿ ಮಾಡಿದೆ. ಡಿಸೆಂಬರ್ 4 ರಂದು ಹೈದರಾಬಾದ್‌ನ ಥಿಯೇಟರ್‌ನಲ್ಲಿ ಅವರ ಇತ್ತೀಚಿನ ಚಿತ್ರ ಪುಷ್ಪ 2: ದಿ ರೂಲ್‌ನ ಪ್ರೀಮಿಯರ್ ಶೋನಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಸಂಭವಿಸಿದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
ಟಿವಿ9 ತೆಲುಗು ನೆಟ್‌ವರ್ಕ್ ಬಂಧನದ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ತಂಡವು ಜುಬಿಲಿ ಹಿಲ್ಸ್‌ನಲ್ಲಿರುವ ಅಲ್ಲು ಅರ್ಜುನ್ ನಿವಾಸಕ್ಕೆ ಬಂದು ಅವರನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಗೆ ಸ್ಥಳಾಂತರಿಸಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.