ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯ ಮಂಗಳಪದವಿನಲ್ಲಿ ರಸ್ತೆಯಲ್ಲೇ ನಿಂತಿದ್ದ ಮಣ್ಣು ಸಾಗಾಟ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ.
ಒಕ್ಕೆತ್ತೂರು ಮೂಲದ ಇರ್ಫಾನ್ (19) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಸಹಸವಾರ ಫಾರಿಸ್ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ನಡೆದ ತಕ್ಷಣ ಗಾಯಾಳುಗಳನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಇರ್ಫಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕನ್ಯಾನ ಕಡೆಯಿಂದ ಹೊರ ರಾಜ್ಯಕ್ಕೆ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಚಾಲಕ ಮಂಗಳಪದವಿನಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ನಿಲುಗಡೆ ಮಾಡಿದ ಬಗ್ಗೆ ಯಾವುದೇ ಮುನ್ನೆಚ್ಚರಿಕಾ ಸೂಚನೆಯನ್ನು ಅಳವಡಿಸಿಲ್ಲ. ಒಕ್ಕೆತ್ತೂರಿನಿಂದ ಬೈಕ್ ನಲ್ಲಿ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ಸಂದರ್ಭ ಲಾರಿ ನಿಲುಗಡೆಯಾಗದ್ದು ಕಾಣದೆ ಈ ಅಪಘಾತವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.