July 23, 2026
Thursday, July 23, 2026
spot_img

SHOCKING | ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ವಿದ್ಯುತ್ ಮೀಟರ್ ರೀಡರ್ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಮೀಟರ್ ರೀಡರ್ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ಮಂಗಳವಾರ ಸಂಜೆ ನಡೆದಿದೆ.

ಸುಳ್ಯ ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಲೋಕನಾಥ (35) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.

ಲೋಕನಾಥ್ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ಅವರ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !