SHOCKING | ನಾಗ್ಪುರ ಆರೆಸ್ಸೆಸ್ ಪ್ರಧಾನ ಕಚೇರಿಗೆ ಸ್ಫೋಟದ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್)ದ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರಿಂದ ಬೆದರಿಕೆ ಕರೆ ಬಂದಿದೆ.

ಈ ಕುರಿತು ಮಾಹಿತಿ ನೀಡಿದ ವಲಯ-3 ಡಿಸಿಪಿ ಗೋರಖ್ ಭಮ್ರೆ, ಇಂದು ಮಧ್ಯಾಹ್ನ 1 ಗಂಟೆಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಫೋನ್ ಕರೆ ಬಂದಿದೆ. ಮಹಲ್ ಪ್ರದೇಶದಲ್ಲಿನ ಆರ್ ಎಸ್ ಎಸ್ ಕೇಂದ್ರ ಕಚೇರಿಯನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಕಚೇರಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!