October 15, 2026
Thursday, October 15, 2026
spot_img

SHOCKING | ಛತ್ತೀಸ್‌ಗಢದ ಪವರ್ ಪ್ಲಾಂಟ್‌ನಲ್ಲಿ ಬಾಯ್ಲರ್ ಸ್ಫೋಟ: 10 ಕಾರ್ಮಿಕರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಪವರ್ ಪ್ಲಾಂಟ್‌ನಲ್ಲಿ ಬಾಯ್ಲರ್ ಏಕಾಏಕಿ ಸ್ಫೋಟಗೊಂಡು 10 ಕಾರ್ಮಿಕರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೇದಾಂತ ವಿದ್ಯುತ್ ಸ್ಥಾವರದಲ್ಲಿ ಮಧ್ಯಾಹ್ನದ ವೇಳೆ ಎಂದಿನಂತೆ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕಾರ್ಮಿಕರು ಮೃತಪಟ್ಟಿದ್ದಾರೆ .

ಸುಮಾರು 30 ರಿಂದ 40 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ರಾಯಗಢ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಭೀತಿ ಎದುರಾಗಿದೆ.

ಘಟನೆ ನಡೆದ ತಕ್ಷಣ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

Must Read