SHOCKING | ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 22 ಕಾರ್ಮಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿರುವ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 22 ಕಾರ್ಮಿಕರು ಗಾಯಗೊಂಡಿದ್ದಾರೆ. ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಜ್ ಕೇಸರಿ ಸ್ಟೀಲ್ ಮಿಲ್‍ನಲ್ಲಿ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದೆ. ಈ ವೇಳೆ ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದೆ. ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯು ಸ್ಕ್ರ್ಯಾಪ್‍ನಿಂದ ಸ್ಟೀಲ್ ಕಂಬಿಗಳನ್ನು ತಯಾರಿಸುತ್ತದೆ. ಈ ಸ್ಫೊಟಕ್ಕೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!