ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.
ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ. ಅನಿಲ್ ಅರೋರಾ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಗೊತ್ತಾಗಿದೆ. ಬಾಂದ್ರಾ ಪೊಲೀಸರು ಮತ್ತು ಮುಂಬೈ ಕ್ರೈಂ ಬ್ರಾಂಚ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.