SHOCKING | ಮಣಿಪುರದಲ್ಲಿ ಬಾಂಬ್ ಸ್ಫೋಟ: ಹಲವರಿಗೆ ಗಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತವಿದ್ದು, ಇತ್ತ ಗಣರಾಜ್ಯೋತ್ಸವಕ್ಕೂ ಒಂದು ದಿನ ಮೊದಲು ಮಣಿಪುರದ ಉಖ್ರುಲ್‌ನಲ್ಲಿ ಬಾಂಬ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ.

ಉಖ್ರುಲ್ ಪ್ರದೇಶವನ್ನು ಮಣಿಪುರ ಪೊಲೀಸ್ ಹಾಗೂ ಭಾರತೀಯ ಸೇನೆ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈಗಾಗಲೇಸಂಭ್ರಮ ಕೆಡಿಸಲು ಭಯೋತ್ಪಾದಕ ಸಂಘಟನೆಗಳು ಸಿದ್ಧತೆ ನಡೆಸಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.ಭದ್ರತಾ ಪಡೆಗಳು ದೆಹಲಿ ಸೇರಿದಂತೆ ಕೆಲ ಭಾಗದಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದೆ.

ಇದೀಗ ಮಣಿಪುರದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮತ್ತೆ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಇದುವರಿಗೆ ಯಾವುದೇ ಸಂಘಟನೆಗಳು ಈ ಘಟನೆಯ ಹೊಣೆ ಹೊತ್ತುಕೊಂಡಿಲ್ಲ. ಉಖ್ರುಲ್ ಪ್ರದೇಶ ಸುತ್ತುವರಿಯಲಾಗಿದೆ. ಭದ್ರತಾ ಪಡೆಗಳು ಹಾಗೂ ಪೊಲೀಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!