SHOCKING | ಪಾಕ್‌ ಮಸೀದಿಯಲ್ಲಿ ಬಾಂಬ್‌ ಸ್ಫೋಟ: ಐವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮಸೀದಿಯಲ್ಲಿ ಪ್ರಬಲ ಬಾಂಬ್‌ ಸ್ಫೋಟಗೊಂಡು ಐವರು ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮದರಸಾದ ಆವರಣದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆಯ ಸಮಯದಲ್ಲಿ ಈ ಬಾಂಬ್‌ ಸ್ಪೋಟ ಸಂಭವಿಸಿದೆ.

ಮೃತರು ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಶೀದ್ ಹೇಳಿದ್ದಾರೆ.

ಮುಸ್ಲಿಮರ ಪವಿತ್ರ ರಂಜಾನ್ ತಿಂಗಳು ಆರಂಭವಾಗುವ ಮೊದಲೇ ಬಾಂಬ್‌ ಸ್ಫೋಟ ನಡೆದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!