August 24, 2026
Monday, August 24, 2026
spot_img

SHOCKING | ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೂವರು ಮಕ್ಕಳು ಸಹಿತ ಏಳು ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ದಿಢೀರ್ ಕುಸಿದು ಬಿದ್ದಿದೆ. ಮೂವರು ಮಕ್ಕಳು ಸಹಿತ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. 

ಮಳೆಯ ರಭಸಕ್ಕೆ ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣವೇ ಧಾವಿಸಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.

ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !