ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಹ್ಮಗಂಟು ಧಾರವಾಹಿಯ ಮೂಲಕ ಗುರುತಿಸಿಕೊಂಡಿದ್ದ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಹೈದರಾಬಾದಿನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣವೇನು ಎಂಬುದು ತಿಳಿದು ಬಂದಿಲ್ಲ.
2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
ಪದವಿ ಮುಗಿಸಿದ ಬಳಿಕ ಸಕಲೇಶಪುರದಿಂದ ಬೆಂಗಳೂರಿಗೆ ಬಂದಿದ್ದಂತ ಶೋಭಿತಾ, ಕನ್ನಡದ 12ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿ ಹೆಸರುಗಳಿಸಿದ್ದರು. ಮಂಗಳಗೌರಿ, ಕೋಗಿಲೆ, ಗಾಳಿಪ, ಬ್ರಹ್ಮಗಂಟು, ಕೃಷ್ಣರುಕ್ಮಿಣಿ, ದೀಪವು ನಿನ್ನದೆ ಗಾಳಿಯು ನಿನ್ನದೇ, ಅಮ್ಮಾವ್ರು, ಮನೆದೇವರು ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದರು.