ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಕುಪ್ವಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದಾಗ ಹರಿಪುರ್ಧರ್ ಪ್ರದೇಶದ ಬಳಿ ಬಸ್ ಉರುಳಿಬಿದ್ದಿದ್ದು, ಅಪಘಾತದಲ್ಲಿ ಎಂಟು ಸಾವುಗಳು ಸಂಭವಿಸಿವೆ ಎಂದು ಸಿರ್ಮೌರ್ ಎಸ್ಪಿ ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ.
ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

