ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಚಂದ್ರಪ್ಪ ಎನ್ನುವವರಿಗೆ ಸೇರಿದ ಕಾರು ಇದಾಗಿದ್ದು, ಪಾಂಡವಪುರದಿಂದ ನಾಗಮಂಗಲಕ್ಕೆ ಹೋಗುವ ವೇಳೆ ರಸ್ತೆ ತಿರುವಿನಲ್ಲಿ ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆ ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ನಡೆಸಿ ವಿಸಿ ನಾಲೆಯಿಂದ ಕಾರ್ ಹೊರ ತೆಗೆದಿದ್ದಾರೆ. ಕಾರ್ ನಲ್ಲಿ ಐವರ ಮೃತದೇಹ ಪತ್ತೆಯಾಗಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.