ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ತೀರ್ಪು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದಾರೆ.
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಇತರ ಪಕ್ಷಗಳ ಮಾತುಕತೆಯನ್ನೂ ಕೇಳಿದ್ದೇನೆ, ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ ಎಂದಿದ್ದಾರೆ.