ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಪತ್ನಿ ಡಾಟಿ ಸದಾನಂದಗೌಡ ಕುಸಿದು ಬಿದ್ದಿದ್ದಾರೆ.
ಬೆಂಗಳೂರಿನ ನಾಗಸಂದ್ರ ಮೆಟ್ರೋ ಸಮೀಪ ಇರುವ ಐಕಿಯಾ ಶಾಪಿಂಗ್ ಮಾಲ್ ನಲ್ಲಿ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ಅವರನ್ನು ಕಾರ್ ಚಾಲಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪತ್ನಿಯನ್ನು ನೋಡಲು ಸದಾನಂದ ಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಅವರೊಂದಿಗೆ ದಾಸರಹಳ್ಳಿ ಶಾಸಕ ಮುನಿರಾಜು ಕೂಡ ಆಗಮಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ದಾಟಿ ಸದಾನಂದ ಗೌಡರಿಗೆ ಚಿಕಿತ್ಸೆ ನೀಡಲಾಗಿದೆ.