SHOCKING | ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ: 6 ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಇಂದು ಮುಂಜಾನೆ ಸಿಲಿಂಡರ್ ಸ್ಫೋಟಗೊಂಡಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಲಹಂಕದ ಎಲ್‌ ಬಿಎಸ್‌ ನಲ್ಲಿ ಈ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐದು ಮನೆಗಳಿಗೆ ಹಾನಿಯಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂ ಟೌನ್ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!