SHOCKING | ಶಿವಕಾಶಿಯ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 8 ಮಂದಿ ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಶಿವಕಾಶಿ ಬಳಿಯಲ್ಲಿರುವ ಚೆನ್ನಗಲಂಪಟ್ಟಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಕೆಲಸ ಮಾಡುತ್ತಿದ್ದ 8 ಮಂದಿ ಕಾರ್ಮಿಕರು ಈ ಸ್ಪೋಟಕ್ಕೆ ಬಲಿಯಾಗಿದ್ದಾರೆ.

ಇನ್ನು 8ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಇಡೀ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಅನ್ನೋ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!