ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರದ ಮಿಶ್ರಿ ಬಜಾರ್ ಪ್ರದೇಶದಲ್ಲಿ ಎರಡು ಸ್ಕೂಟರ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೂಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಿಶ್ರಿ ಬಜಾರ್ ಪ್ರದೇಶದಲ್ಲಿ ನಿಲ್ಲಿಸಿದ್ದ ಎರಡು ಸ್ಕೂಟರ್’ಗಳು ಇಂದು ಸಂಜೆ 7:15 ರ ಸುಮಾರಿಗೆ ಸ್ಫೋಟಗೊಂಡಿದ್ದು, ಒಬ್ಬ ಮಹಿಳೆ ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅಶುತೋಷ್ ಕುಮಾರ್ ತಿಳಿಸಿದ್ದಾರೆ.