SHOCKING | ಅಯ್ಯಪ್ಪ ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ತೆಲಂಗಾಣದಲ್ಲಿ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ(Fire Accident) ಸಂಭವಿಸಿದೆ.

ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.ಹರಸಾಹಸ ಪಡುತ್ತಿದ್ದಾರೆ.

ಈ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!