SHOCKING | ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ವಹಣಾ ಕಾರ್ಯದ ಸಂದರ್ಭ ಸ್ಪೈಸ್​​​​ಜೆಟ್ (SpiceJet) ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ (Delhi Airport) ಸಂಭವಿಸಿದೆ.

ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದ್ದು, ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು .

ವಿಮಾನಕ್ಕೆ ಬೆಂಕಿಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!