SHOCKING | ಬೆಂಗಳೂರಿನ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ: 4 ಬೈಕ್​ ಗಳು ಬೆಂಕಿಗೆ ಆಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ.

ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ 3 ಸ್ಕೂಟರ್ ಹಾಗೂ 1 ಬೈಕ್ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ.

ಆದರೆ, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬೈಕ್ ಗಳೆಲ್ಲ ಸುಟ್ಟು ಕರಕಲಾಗಿವೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!