SHOCKING | ನಾಲ್ಕು ಅಂತಸ್ತಿನ ಹಾಸ್ಟೆಲ್‌ನಲ್ಲಿ ಬೆಂಕಿ, 10 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್ ನಗರದಲ್ಲಿರುವ ಹಾಸ್ಟೆಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಸಜೀವ ದಹನವಾಗಿದ್ದಾರೆ. ತಕ್ಷಣವೇ ಶೋಧ ಮತ್ತು ರಕ್ಷಣಾ ಸಿಬ್ಬಂದಿಗಳು ವೆಲ್ಲಿಂಗ್ಟನ್‌ನ ಹಾಸ್ಟೆಲ್ ತಲುಪಿದ್ದು, ಬದುಕಿರುವವರನ್ನು ಉಳಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡ ಇದಾಗಿದ್ದು, ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿದೆ. ತಡರಾತ್ರಿ ಬೆಂಕಿ ಹತ್ತಿದ ಕಾರಣ ಹೆಚ್ಚಿನವರು ನಿದ್ರೆಯಲ್ಲಿದ್ದರು ಎನ್ನಲಾಗಿದೆ. 20 ಮಂದಿ ಪತ್ತೆಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ, ನಿನ್ನೆ ತಡರಾತ್ರಿ ೬ ಇದ್ದ ಸಾವಿನ ಸಂಖ್ಯೆ ಇದೀಗ 10ಕ್ಕೆ ಏರಿಕೆಯಾಗಿದೆ, ಸಂಖ್ಯೆ ಹೆಚ್ಚುವ ಭೀತಿ ಎದುರಾಗಿದೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!