SHOCKING | ಮುಂಬೈ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಪ್ರಯಾಣಿಕರ ಸೇವೆ ತಾತ್ಕಾಲಿಕ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಕೊಟಕ್ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (BKC) ಮೆಟ್ರೋ ನಿಲ್ದಾಣದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್(BKC) ಮೆಟ್ರೋ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ಎ4 ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಮೆಟ್ರೋ ನಿಲ್ದಾಣದ ಸುತ್ತ ದಟ್ಟ ಹೊಗೆಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಿಕೆಎಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಇದೀಗ ಪ್ರಯಾಣಿಕರ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅದೃಷ್ಠವಶಾತ್ ಘಟನೆಯಲ್ಲಿ ಯಾವುದೇ ಪ್ರಯಾಣಿಕರೂ, ಸಿಬ್ಬಂದಿಗಳು, ಸ್ಥಳೀಯರಿಗೆ ಗಾಯವಾಗಿಲ್ಲ. ಸುರಕ್ಷತಾ ದೃಷ್ಟಿಯಿಂದ ಮುಂದಿನ ಸೂಚನೆವರೆಗೆ ಬಾಂದ್ಲಾ ಕುರ್ಲಾ ಕಾಂಪ್ಲೆಕ್ಸ್ ಸ್ಥಗಿತಗೊಳಿಿಸಲಾಗಿದೆ ಎಂದು ಮುಂಬೈ ಮೆಟ್ರೋ ಸಂಸ್ಥೆ ಹೇಳಿದೆ. ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಿರುವ ಕಾರಣ ಬಿಕೆಸಿ ನಿಲ್ದಾಣಧ ಪ್ರಯಾಣಿಕರ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈ ಮೆಟ್ರೋ ಹೇಳಿದೆ. ಹೊಗೆ ಕಡಿಮೆಯಾದ ಬಳಿಕ ಸುರಕ್ಷತಾ ಪರಿಶೀಲನೆ ನಡೆಯಲಿದೆ. ಸುರಕ್ಷತೆ ಖಚಿತಪಡಿಸಿಕೊಂಡ ಬಳಿಕ ರೈಲು ಸೇವೆ ಪುನರ್ ಆರಂಭಗೊಳ್ಳಲಿದೆ ಎಂದು ಸೂಚಿಸಿದೆ.ಪ್ರಯಾಣಿಕರ ತಾಳ್ಮೆಗೆ ಅಭಿನಂದನೆಗಳು ಎಂದು ಮುಂಬೈ ಮೆಟ್ರೋ ಹೇಳಿದೆ.

ಮೆಟ್ರೋ ನಿಲ್ದಾಣದಿಂದ 40 ರಿಂದ 50 ಅಡಿ ಆಳದಲ್ಲಿರುವ ಪೀಠೋಪರಣಗಳ ಮಳಿಗೆ ಹಾಗೂ ಸ್ಟೋರೇಜ್ ಶಾಪ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅನಾಹುತ ಸೃಷ್ಟಿಯಾಗಿದೆ. ಮೆಟ್ರೋ ನಿಲ್ದಾಣದ ಯಾವುದೇ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿಲ್ಲ. ಎ4 ಪ್ರವೇಶ ದ್ವಾರದ ಬಳಿಕ ಈ ಸ್ಟೋರ್ ಇರುವುದರಿಂದ ಪ್ರಯಾಣಿಕರಿಗೂ ಸಮಸ್ಯೆಯಾಗಿದೆ. ಹೀಗಾಗಿ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈ ಮೆಟ್ರೋ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!