ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ 70 ಎಂಎಂ ಬುಲೆಟ್ನ ಶಾಟ್ಗನ್ ಬಳಸಿ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಹಿಂಬದಿ ಸೀಟ್ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ. ಜೊತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.