ಹೊಸದಿಗಂತ ಡಿಜಿಟಲ್ ಡೆಸ್ಕ್;
ಮಹಾರಾಷ್ಟ್ರದಲ್ಲಿ ಬಸ್ ಏಕಾಏಕಿ ಎದುರಿಗೆ ಬಂದಿದ್ದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಬಿದ್ದಿದೆ. ಪರಿಣಾಮ ೧೨ ಜನರು ಮೃತಪಟ್ಟು ಹಲವಾರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಎದುರಿಗೆ ಸಡನ್ ಆಗಿ ಬಂದ ಬೈಕ್ಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬೇರೆ ಕಡೆ ತಿರುಗಿದ ಬಸ್ ಅಪಘಾತಕ್ಕೆ ಈಡಾಗಿದೆ. ದುರ್ಘಟನೆಯನ್ನು ನೋಡಿದ ಸ್ಥಳೀಯರು ಕೂಡಲೇ ಸಂಬಂಧಪಟ್ಟ ಇಲಾಖೆಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಇನ್ನು ಅಪಘಾತ ಆಗುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆಯನ್ನು ಶುರು ಮಾಡಿದ್ದಾರೆ.