SHOCKING | ಚಿಕ್ಕಮಗಳೂರಲ್ಲಿ ಹೃದಯವಿದ್ರಾವಕ ಘಟನೆ: ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಅಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾವು ಯಾರಿಗೆ ಯಾವಾಗ ಹೇಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ನಿನ್ನೆ ಹಾಗೂ ಇವತ್ತು ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ಮಗಳು ಎಂದು ಚಂದ್ರು ಅದ್ಧೂರಿಯಾಗಿ ಮದುವೆಗೆ ತಯಾರಿ ಮಾಡಿದ್ದರು. ಆದರೆ, ಮಗಳ ಆರತಕ್ಷತೆಯ ದಿನ ಆತ್ಮೀಯ ಸ್ನೇಹಿತರೊಬ್ಬರಿಗೆ ಲಗ್ನಪತ್ರಿಕೆ ಕೊಟ್ಟಿಲ್ಲ ಎಂದು ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಹೋಗಿ ಕಾರ್ಡ್ ಕೊಟ್ಟು ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿತ್ತು. ತೀವ್ರ ಗಂಭೀರ ಗಾಯವಾಗಿದ್ದ ಚಂದ್ರುರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಂದ್ರು ಭಾನುವಾರ ಮಧ್ಯಾಹ್ನನವೇ ಮರಣ ಹೊಂದಿದ್ದರು.

ವಿಷಯ ಮನೆಯವರಿಗೆ ತಿಳಿದರೆ ಮದುವೆ ನಿಲ್ಲುತ್ತೆ ಎಂದು ಕುಟುಂಬಸ್ಥರು ವಿಷಯವನ್ನ ಮೃತ ಚಂದ್ರು ಪತ್ನಿ ಹಾಗೂ ಮಗಳು ದೀಕ್ಷಾಗೆ ಹೇಳಲೇ ಇಲ್ಲ. ಅಪಘಾತವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ಭಾನುವಾರ ಸಂಜೆ ಆರತಕ್ಷತೆ ಮುಗಿಸಿ, ಇಂದು ಬೆಳಗ್ಗೆ ಮುಹೂರ್ತವನ್ನೂ ಮುಗಿಸಿದ್ದಾರೆ. ಮುಹೂರ್ತ ಮುಗಿದ ಬಳಿಕ ವಿಷಯವನ್ನ ಮನೆಯವರಿಗೆ ತಿಳಿಸಲಾಗಿದೆ.

ವಿಷಯ ಕೇಳಿ ಮೃತನ ಪತ್ನಿ ಹಾಗೂ ಮಗಳಿಗೆ ಬರಸಿಡಿಲು ಬಡಿದಂತಾಗಿ ಕುಟುಂಬಸ್ಥರ ನೋವಿನ ಆಕ್ರಂದನ ಮುಗಿಲುಮುಟ್ಟಿದೆ.

ಕಡೂರು ಪಟ್ಟಣದ ಬೀರೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು, ಗಂಡು-ಹೆಣ್ಣು ಮನೆಗೆ ಬರುವ ವೇಳೆ ಮನೆಗೆ ತಂದೆಯ ಮೃತದೇಹ ಕೂಡ ಬಂದಿತ್ತು. ಮನೆಯವರು ಮಗಳ ಮದುವೆಯಾಯ್ತು ಅಂತ ಸಂತೋಷ ಪಡಬೇಕೋ ಅಥವಾ ಮನೆಯ ಯಜಮಾನ ಸಾವನ್ನಪ್ಪಿದ್ದಾನೆ ಎಂದು ಕಣ್ಣೀರಡಬೇಕೋ ತಿಳಿಯದಂತೆ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!