ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.
ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.