SHOCKING | ಹೈಟೆನ್ಷನ್ ತಂತಿ ಬಿದ್ದು ಹೊತ್ತಿಕೊಂಡ ಬಸ್​: ಕನಿಷ್ಠ 10 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಗಾಜಿಪುರದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ, ಜನರು ಸುರಕ್ಷತೆಗಾಗಿ ಬಸ್’ನಿಂದ ಹೊರಗೆ ಜಿಗಿಯಲು ಸಾಧ್ಯವಾಗಲಿಲ್ಲ, ಇದು ಹಲವಾರು ವ್ಯಕ್ತಿಗಳನ್ನ ಜೀವಂತವಾಗಿ ಸುಡುವ ಭಯವನ್ನ ಹೆಚ್ಚಿಸಿದೆ.ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗ್ತಿದೆ.

ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂದಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!