SHOCKING | ದಾವಣಗೆರೆಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಾವಣಗೆರೆ ನಗರದ ಕುಂದುವಾಡದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಮೃತಪಟ್ಟ ಘಟನೆ ನಡೆದಿದೆ.

ಮೃತ ಮಗುವನ್ನು 2 ವರ್ಷದ ಚರಸ್ವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಮಗುವಿನ ಮೇಲೆ ಹರಿದಿದೆ.

ಅಂಗನವಾಡಿಯಿಂದ ಮಗು ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಆಕ್ರೋಶಗೊಂಡ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!