ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ .
ನಾಗ್ಪುರ ನಗರದ ಹೊರವಲಯದಲ್ಲಿ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ಮಧ್ಯರಾತ್ರಿ 12.15 ರಿಂದ 2 ಗಂಟೆಯ ನಡುವೆ ಅಪಘಾತ ಸಂಭವಿಸಿದೆ.
ಇವರೆಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದಾಗ ಕಾರು ಸೋಯಾಬೀನ್ ಸಾಗಿಸುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ’ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.