ಹೊಸದಿಗಂತ ವರದಿ,ಹಾಸನ :
ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐದು ಮಂದಿಜಿ ಗಾಯಗೊಂಡು, ಓರ್ವನ ಸ್ಥಿತಿ ಗಂಭೀರಗೊಂಡಿರುವ ಅಪಘಾತ ಜಿಲ್ಲೆಯ, ಸಕಲೇಶಪುರ ತಾಲ್ಲೂಕಿನ, ಕೆಂಪುಹಳ್ಳ ಬಳಿ ನಡೆದಿದೆ.
ಧರ್ಮಸ್ಥಳದಿಂದ-ಬೆಂಗಳೂರಿಗೆ ಕಡೆಗೆ ಬರುತ್ತಿದ್ದ ಕಾರುಗಳು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯ ಕೆಂಪುಹಳ್ಳ ತಿರುವಿನಲ್ಲಿ ಕಾರು ಓವರ್ ಟೆಕ್ ಮಾಡುವಾಗ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಬೆಂಗಳೂರು ಮೂಲದವರು. ಕೂದಲೆಳೆ ಅಂತರದಲ್ಲಿ ಲಾರಿ ಪ್ರಪಾತಕ್ಕೆ ಬೀಳುವುದು ತಪ್ಪಿದೆ.
ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.