SHOCKING | ಸುಳ್ಯ ಗೂನಡ್ಕ ಬಳಿ ಭೀಕರ ಅಪಘಾತ: ಕಾರಿನಿಂದ ಕಿತ್ತು ಎಸೆಯಲ್ಪಟ್ಟ ಎಂಜಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಗೂನಡ್ಕ ಎಂಬಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಮಡಿಕೇರಿ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಸುಳ್ಯ ಕಡೆಯಿಂದ ತೆರಳುತ್ತಿದ್ದ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಸಜ್ಜುಗುಜ್ಜಾಗಿದೆ.

ಕಾರಿನಲ್ಲಿ ಕಾಸರಗೋಡು ಮೂಲದ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!