ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 25 ಮಂದಿ ಮಹಿಳೆಯರು ಸೇರಿ ಒಟ್ಟು 27 ಜನ ಸಾವನ್ನಪ್ಪಿದ್ದಾರೆ.
ಹತ್ರಾಸ್ ಜಿಲ್ಲೆಯ ಸಿಕಂದ್ರರಾವ್ ಪ್ರದೇಶದ ರತಿಭಾನ್ಪುರ ಗ್ರಾಮದಲ್ಲಿ ನಡೆದ ಭೋಲೆ ಬಾಬಾ ಅವರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಒಟ್ಟು 27 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ಹಲವಾರು ಮಹಿಳೆಯರು ಮತ್ತು ಒಂದು ಮಗು ಸೇರಿದೆ. ಘಟನೆಯ ಸ್ಥಳವು ಇಟಾ ಸಿಕಂದ್ರರಾವ್ ಗಡಿಯಲ್ಲಿದೆ.
ಇಟಾದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಉಮೇಶ್ ಕುಮಾರ್ ತ್ರಿಪಾಠಿ ಅವರು ಸಾವುನೋವುಗಳನ್ನು ದೃಢಪಡಿಸಿದ್ದಾರೆ.
ಈ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.