ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ವ್ಯಾಗ್ನರ್ ಪಡೆಯಲ್ಲಿ (Wagner Army) ಸಿಲುಕಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್ನಲ್ಲಿ ಸಾವಿಗೀಡಾಗಿದ್ದಾನೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ಅಧಿಕಾರಿಗಳು ದೃಢಪಡಿಸಿದ್ದಾರೆ.
ಉಕ್ರೇನ್ ವಿರುದ್ಧದ ಯುದ್ಧದಲ್ಲಿ (Ukraine War) ಹೈದರಾಬಾದ್ ಮೂಲದ ಯುವಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಮೊಹಮ್ಮದ್ ಅಸ್ಫಾನ್ (Mohammed Afsan )ಎಂದು ಗುರುತಿಸಲಾಗಿದೆ. ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.
ಕುಟುಂಬದೊಂದಿಗೆ ಸಂಪರ್ಕ ಸಾಧಿಸುತ್ತಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಲು ಸಕಲ ತಯಾರಿ ನಡೆಸುತ್ತಿದ್ದೇವೆ. ಅಸ್ಫಾನ್ ಅವರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯ (Russia Army) ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇನ್ನುಳಿದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
We have learnt about the tragic death of an Indian national Shri Mohammed Asfan. We are in touch with the family and Russian authorities. Mission will make efforts to send his mortal remains to India.@MEAIndia
— India in Russia (@IndEmbMoscow) March 6, 2024
ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಹೈದರಾಬಾದಿನ ಮೂಲದ ಯುವಕ ರಷ್ಯಾದ ವ್ಯಾಗ್ನರ್ ಪಡೆಯಲ್ಲಿ ಸಿಲುಕಿದ್ದರು. ತೆಲಂಗಾಣ, ಗುಜರಾತ್, ಕರ್ನಾಟಕ (ಕಲಬುರಗಿ ಜಿಲ್ಲೆಯ ಮೂವರು), ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ 20ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿ ಸಿಲುಕಿದ್ದಾರೆ. ಅವರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೋವೊಂದರಲ್ಲಿ ಹೇಳಿಕೊಂಡಿದ್ದರು. ಈ ವೀಡಿಯೋ ಬೆಳಕಿಗೆ ಬರ್ತಿದ್ದಂತೆ ಓವೈಸಿ (Asaduddin Owaisi) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಯುವಕರನ್ನು ರಕ್ಷಿಸುವಂತೆ ಒತ್ತಾಯಿಸಿದ್ದರು.