ಬೆಂಗಳೂರಿನಲ್ಲಿ ಶಾಕಿಂಗ್‌ ಘಟನೆ, ಪಿಜಿಗೆ ನುಗ್ಗಿ ಕತ್ತು ಕುಯ್ದು ಯುವತಿಯ ಬರ್ಬರ ಕೊಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೇಡಿಸ್ ಪಿಜಿಗೆನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ.

ಕೃತಿ ಕುಮಾರಿ (24) ಮೃತ ಯುವತಿ. ಈಕೆ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.

ರಾತ್ರಿ 11:30ರ ವೇಳೆಗೆ ಘಟನೆ ನಡೆದಿದೆ. ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ. ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!